2 ಪೂರ್ವಕಾಲವೃತ್ತಾಂತ Chapter 29 KANIRV Bible Verse Images

2 ಪೂರ್ವಕಾಲವೃತ್ತಾಂತ 29 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 2 ಪೂರ್ವಕಾಲವೃತ್ತಾಂತ 29 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


2 ಪೂರ್ವಕಾಲವೃತ್ತಾಂತ 29:1 (KANIRV)
Square Portrait Landscape 4K UHD
ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.

2 ಪೂರ್ವಕಾಲವೃತ್ತಾಂತ 29:2 (KANIRV)
Square Portrait Landscape 4K UHD
ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.

2 ಪೂರ್ವಕಾಲವೃತ್ತಾಂತ 29:3 (KANIRV)
Square Portrait Landscape 4K UHD
ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.

2 ಪೂರ್ವಕಾಲವೃತ್ತಾಂತ 29:4 (KANIRV)
Square Portrait Landscape 4K UHD
ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ

2 ಪೂರ್ವಕಾಲವೃತ್ತಾಂತ 29:5 (KANIRV)
Square Portrait Landscape 4K UHD
ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.

2 ಪೂರ್ವಕಾಲವೃತ್ತಾಂತ 29:6 (KANIRV)
Square Portrait Landscape 4K UHD
ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.

2 ಪೂರ್ವಕಾಲವೃತ್ತಾಂತ 29:7 (KANIRV)
Square Portrait Landscape 4K UHD
ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.

2 ಪೂರ್ವಕಾಲವೃತ್ತಾಂತ 29:8 (KANIRV)
Square Portrait Landscape 4K UHD
ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.

2 ಪೂರ್ವಕಾಲವೃತ್ತಾಂತ 29:9 (KANIRV)
Square Portrait Landscape 4K UHD
ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.

2 ಪೂರ್ವಕಾಲವೃತ್ತಾಂತ 29:10 (KANIRV)
Square Portrait Landscape 4K UHD
ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.

2 ಪೂರ್ವಕಾಲವೃತ್ತಾಂತ 29:11 (KANIRV)
Square Portrait Landscape 4K UHD
ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.

2 ಪೂರ್ವಕಾಲವೃತ್ತಾಂತ 29:12 (KANIRV)
Square Portrait Landscape 4K UHD
ಕೂಡಲೆ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,

2 ಪೂರ್ವಕಾಲವೃತ್ತಾಂತ 29:13 (KANIRV)
Square Portrait Landscape 4K UHD
ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ,

2 ಪೂರ್ವಕಾಲವೃತ್ತಾಂತ 29:14 (KANIRV)
Square Portrait Landscape 4K UHD
ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್,

2 ಪೂರ್ವಕಾಲವೃತ್ತಾಂತ 29:15 (KANIRV)
Square Portrait Landscape 4K UHD
ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.

2 ಪೂರ್ವಕಾಲವೃತ್ತಾಂತ 29:16 (KANIRV)
Square Portrait Landscape 4K UHD
ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.

2 ಪೂರ್ವಕಾಲವೃತ್ತಾಂತ 29:17 (KANIRV)
Square Portrait Landscape 4K UHD
ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.

2 ಪೂರ್ವಕಾಲವೃತ್ತಾಂತ 29:18 (KANIRV)
Square Portrait Landscape 4K UHD
ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.

2 ಪೂರ್ವಕಾಲವೃತ್ತಾಂತ 29:19 (KANIRV)
Square Portrait Landscape 4K UHD
ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ” ಎಂದರು.

2 ಪೂರ್ವಕಾಲವೃತ್ತಾಂತ 29:20 (KANIRV)
Square Portrait Landscape 4K UHD
ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.

2 ಪೂರ್ವಕಾಲವೃತ್ತಾಂತ 29:21 (KANIRV)
Square Portrait Landscape 4K UHD
ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.

2 ಪೂರ್ವಕಾಲವೃತ್ತಾಂತ 29:22 (KANIRV)
Square Portrait Landscape 4K UHD
ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.

2 ಪೂರ್ವಕಾಲವೃತ್ತಾಂತ 29:23 (KANIRV)
Square Portrait Landscape 4K UHD
ಕಡೆಯಲ್ಲಿ ದೋಷಪರಿಹಾರಕ ಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಮತ್ತು ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟರು.

2 ಪೂರ್ವಕಾಲವೃತ್ತಾಂತ 29:24 (KANIRV)
Square Portrait Landscape 4K UHD
ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.

2 ಪೂರ್ವಕಾಲವೃತ್ತಾಂತ 29:25 (KANIRV)
Square Portrait Landscape 4K UHD
ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.

2 ಪೂರ್ವಕಾಲವೃತ್ತಾಂತ 29:26 (KANIRV)
Square Portrait Landscape 4K UHD
ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು.

2 ಪೂರ್ವಕಾಲವೃತ್ತಾಂತ 29:27 (KANIRV)
Square Portrait Landscape 4K UHD
ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.

2 ಪೂರ್ವಕಾಲವೃತ್ತಾಂತ 29:28 (KANIRV)
Square Portrait Landscape 4K UHD
ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.

2 ಪೂರ್ವಕಾಲವೃತ್ತಾಂತ 29:29 (KANIRV)
Square Portrait Landscape 4K UHD
ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.

2 ಪೂರ್ವಕಾಲವೃತ್ತಾಂತ 29:30 (KANIRV)
Square Portrait Landscape 4K UHD
ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.

2 ಪೂರ್ವಕಾಲವೃತ್ತಾಂತ 29:31 (KANIRV)
Square Portrait Landscape 4K UHD
ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.

2 ಪೂರ್ವಕಾಲವೃತ್ತಾಂತ 29:32 (KANIRV)
Square Portrait Landscape 4K UHD
ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.

2 ಪೂರ್ವಕಾಲವೃತ್ತಾಂತ 29:33 (KANIRV)
Square Portrait Landscape 4K UHD
ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.

2 ಪೂರ್ವಕಾಲವೃತ್ತಾಂತ 29:34 (KANIRV)
Square Portrait Landscape 4K UHD
ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.

2 ಪೂರ್ವಕಾಲವೃತ್ತಾಂತ 29:35 (KANIRV)
Square Portrait Landscape 4K UHD
ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.

2 ಪೂರ್ವಕಾಲವೃತ್ತಾಂತ 29:36 (KANIRV)
Square Portrait Landscape 4K UHD
ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.

Available Bible Translations

American Standard Version (ASV)
2 Chronicles 29 (ASV) »
King James Version (KJV)
2 Chronicles 29 (KJV) »
GOD’S WORD® (GW)
2 Chronicles 29 (GW) »
Berean Bible (BSB)
2 Chronicles 29 (BSB) »
World English Bible (WEB)
2 Chronicles 29 (WEB) »
French Bible (LSG)
2 Chroniques 29 (LSG) »
German Bible (LUTH1912)
2 Chronik 29 (LUTH1912) »
Arabic Bible (AVD)
٢ أخبار 29 (AVD) »
Portuguese Bible (BSL)
2 Crônicas 29 (BSL) »
Vietnamese Bible (VIE)
2 Sử Ký 29 (VIE) »
Spanish Bible (RVA)
2 Crónicas 29 (RVA) »
Italian Bible (RIV)
2 Cronache 29 (RIV) »
Chinese Simplified (CUVS)
历 代 志 下 29 (CUVS) »
Chinese Traditional (CUVT)
歷 代 志 下 29 (CUVT) »
Albanian Bible (ALB)
2 Kronikave 29 (ALB) »
Swedish Bible (SV1917)
2 Krönikeboken 29 (SV1917) »
Ukrainian Bible (UKR)
2 хроніки 29 (UKR) »
Hungarian Bible (KAR)
2 Krónika 29 (KAR) »
Bulgarian Bible (BULG)
2 Летописи 29 (BULG) »
Japanese Bible (JPN)
歴代志下 29 (JPN) »
Norwegian Bible (NORSK)
2 Krønikebok 29 (NORSK) »

2 ಪೂರ್ವಕಾಲವೃತ್ತಾಂತ (KANIRV) Chapter Selection

KANIRV Book Selection List