ಧರ್ಮೋಪದೇಶಕಾಂಡ Chapter 34 KANIRV Bible Verse Images

ಧರ್ಮೋಪದೇಶಕಾಂಡ 34 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಧರ್ಮೋಪದೇಶಕಾಂಡ 34 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಧರ್ಮೋಪದೇಶಕಾಂಡ 34:1 (KANIRV)
Square Portrait Landscape 4K UHD
ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,

ಧರ್ಮೋಪದೇಶಕಾಂಡ 34:2 (KANIRV)
Square Portrait Landscape 4K UHD
ನಫ್ತಾಲಿ ಪ್ರದೇಶ, ಎಫ್ರಾಯೀಮ್ ಮತ್ತು ಮನಸ್ಸೆ ಕುಲಗಳವರ ಸೀಮೆ, ಪಶ್ಚಿಮಸಮುದ್ರದವರೆಗೂ ಯೆಹೂದ ಸೀಮೆ,

ಧರ್ಮೋಪದೇಶಕಾಂಡ 34:3 (KANIRV)
Square Portrait Landscape 4K UHD
ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ,

ಧರ್ಮೋಪದೇಶಕಾಂಡ 34:4 (KANIRV)
Square Portrait Landscape 4K UHD
“ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.

ಧರ್ಮೋಪದೇಶಕಾಂಡ 34:5 (KANIRV)
Square Portrait Landscape 4K UHD
ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.

ಧರ್ಮೋಪದೇಶಕಾಂಡ 34:6 (KANIRV)
Square Portrait Landscape 4K UHD
ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.

ಧರ್ಮೋಪದೇಶಕಾಂಡ 34:7 (KANIRV)
Square Portrait Landscape 4K UHD
ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.

ಧರ್ಮೋಪದೇಶಕಾಂಡ 34:8 (KANIRV)
Square Portrait Landscape 4K UHD
ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.

ಧರ್ಮೋಪದೇಶಕಾಂಡ 34:9 (KANIRV)
Square Portrait Landscape 4K UHD
ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.

ಧರ್ಮೋಪದೇಶಕಾಂಡ 34:10 (KANIRV)
Square Portrait Landscape 4K UHD
ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು.

ಧರ್ಮೋಪದೇಶಕಾಂಡ 34:11 (KANIRV)
Square Portrait Landscape 4K UHD
ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು.

ಧರ್ಮೋಪದೇಶಕಾಂಡ 34:12 (KANIRV)
Square Portrait Landscape 4K UHD
ಅವನು ಇಸ್ರಾಯೇಲರ ಕಣ್ಣ ಮುಂದೆ ವಿಶೇಷವಾದ ಭುಜಪರಾಕ್ರಮವನ್ನೂ ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು.

Available Bible Translations

American Standard Version (ASV)
Deuteronomy 34 (ASV) »
King James Version (KJV)
Deuteronomy 34 (KJV) »
GOD’S WORD® (GW)
Deuteronomy 34 (GW) »
Berean Bible (BSB)
Deuteronomy 34 (BSB) »
World English Bible (WEB)
Deuteronomy 34 (WEB) »
French Bible (LSG)
Deutéronome 34 (LSG) »
German Bible (LUTH1912)
Deuteronomium 34 (LUTH1912) »
Hebrew Bible (HEB)
דברים 34 (HEB) »
Portuguese Bible (BSL)
Deuteronômio 34 (BSL) »
Spanish Bible (RVA)
Deuteronomio 34 (RVA) »
Italian Bible (RIV)
Deuteronomio 34 (RIV) »
Chinese Simplified (CUVS)
申 命 记 34 (CUVS) »
Chinese Traditional (CUVT)
申 命 記 34 (CUVT) »
Swedish Bible (SV1917)
5 Mosebok 34 (SV1917) »
Hungarian Bible (KAR)
5 Mózes 34 (KAR) »
Japanese Bible (JPN)
申命記 34 (JPN) »
Norwegian Bible (NORSK)
5 Mosebok 34 (NORSK) »

ಧರ್ಮೋಪದೇಶಕಾಂಡ (KANIRV) Chapter Selection

KANIRV Book Selection List